alex Certify
ಕನ್ನಡ ದುನಿಯಾ       Mobile App
       

Kannada Duniya

ರಾತ್ರಿಯಿಡಿ ಮನೆಗೆ ಬಾರದ ಯಡಿಯೂರಪ್ಪ…!

ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರದಂದು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದ ಯಡಿಯೂರಪ್ಪನವರು ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಛೇರಿಗೆ ತೆರಳಿ ಹಿರಿಯ ಅಧಿಕಾರಿಗಳೊಂದಿಗೆ ಔಪಚಾರಿಕ ಸಭೆ ನಡೆಸಿದ್ದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರೂ ಬಹುಮತ ಸಾಬೀತಿಗೆ ಶಾಸಕರ ಅಗತ್ಯ ಸಂಖ್ಯಾಬಲವಿಲ್ಲದಿರುವ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಅನಿವಾರ್ಯತೆಯಿರುವ ಹಿನ್ನಲೆಯಲ್ಲಿ ಯಡಿಯೂರಪ್ಪನವರು ಕಳೆದ ರಾತ್ರಿ ಮನೆಗೆ ತೆರಳದೆ ಖಾಸಗಿ ಹೋಟೆಲ್ ಒಂದರಲ್ಲಿ ಬಿಜೆಪಿ ನಾಯಕರೊಂದಿಗೆ ಬೆಳಗಿನ ಜಾವದವರೆಗೂ ಸಭೆ ನಡೆಸಿದ್ದಾರೆನ್ನಲಾಗಿದೆ.

ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಬೆಳಗಿನ ಜಾವ ಪುತ್ರನ ಮನೆಗೆ ತೆರಳಿದ್ದ ಯಡಿಯೂರಪ್ಪನವರು, ಬಳಿಕ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ನಿವಾಸಕ್ಕೆ ಆಗಮಿಸಿದ್ದಾರೆ.

ಯಡಿಯೂರಪ್ಪನವರನ್ನು ಅಭಿನಂದಿಸಲು ಮನೆ ಬಳಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಕಾದು ನಿಂತಿದ್ದು, ಅವರನ್ನು ಭೇಟಿಯಾದ ಯಡಿಯೂರಪ್ಪನವರು ಬಳಿಕ ತಮ್ಮ ನಿವಾಸದಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹಾಗೂ ಡಿಜಿ, ಐಜಿಪಿ ನೀಲಮಣಿ ರಾಜುರನ್ನು ಭೇಟಿ ಮಾಡಿ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...