alex Certify
ಕನ್ನಡ ದುನಿಯಾ       Mobile App
       

Kannada Duniya

ಸಹೋದರ ಕುಮಾರಸ್ವಾಮಿ ಅವರ ನೆರವಿಗೆ ಧಾವಿಸಿದ ರೇವಣ್ಣ ಹೇಳಿದ್ದೇನು?

 ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಸ್ಟ್ 2 ರಂದು ಬಂದ್ ಗೆ ಕರೆ ನೀಡಲಾಗಿದೆ. ಈ ಬಂದ್ ಗೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಯಾರೊಬ್ಬರೂ ಬೆಂಬಲ ನೀಡಿಲ್ಲವಾದರೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಯೇ ರಾಜ್ಯ ವಿಭಜನೆಗೆ ಕುಮ್ಮಕ್ಕು ನೀಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಕರ್ನಾಟಕವನ್ನು ವಿಭಜನೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಷಡ್ಯಂತ್ರ ನಡೆಸಿದ್ದಾರೆ. ಹೀಗಾಗಿಯೇ ಉತ್ತರ ಕರ್ನಾಟಕದ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ದೇವೇಗೌಡರ ಅನುಮತಿ ಇಲ್ಲದೆಯೇ ಕುಮಾರಸ್ವಾಮಿ ಈ ರೀತಿ ಹೇಳಲು ಸಾಧ್ಯವೇ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಡಿ. ರೇವಣ್ಣ, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಧಿಕಾರಾವಧಿಯಲ್ಲಿ ಏನೇನು ಆಗಿದೆ ಎಂಬ ಬಹಿರಂಗ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ. ಜೊತೆಗೆ, ಯಡಿಯೂರಪ್ಪನವರು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಅವರ ಕುರಿತು ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...