alex Certify
ಕನ್ನಡ ದುನಿಯಾ       Mobile App
       

Kannada Duniya

ಯಾವುದೇ ಮಾಟ-ಮಂತ್ರ ನಮಗೆ ತಟ್ಟಲ್ಲ: ಹೆಚ್.ಡಿ. ರೇವಣ್ಣ

ಸರ್ಕಾರವನ್ನು ಪತನಗೊಳಿಸಲು ಕೆಲವರು ಮಾಟ-ಮಂತ್ರ ಮಾಡಿಸಿದ್ದಾರೆಂಬ ಮಾತುಗಳಿಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ನಮಗೆ ಯಾವುದೇ ಮಾಟ ಮಂತ್ರ ತಟ್ಟಲ್ಲ. ಇದನ್ನು ಮಾಡಿಸಿದವರಿಗೇ ರಿವರ್ಸ್ ಆಗುತ್ತೆ ಎಂದು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮಗೆ ರಾಹುಕಾಲ, ಗುಳಿಕಕಾಲಗಳು ಕೂಡ ತೊಂದರೆ ನೀಡುವುದಿಲ್ಲ. ಯಾರೇನೇ ಮಾಟ-ಮಂತ್ರ ಮಾಡಿಸಿದರೂ ಕುಮಾರಸ್ವಾಮಿಯವರ ನೇತೃತ್ವದ ಸರ್ಕಾರ ಯಾವುದೇ ತೊಂದರೆ ಇಲ್ಲದೆ ಮುಂದುವರೆಯುತ್ತದೆ ಎಂದಿದ್ದಾರೆ.

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಮಾತ್ರ ಗಮನ ನೀಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಾಸನದ ಅಭಿವೃದ್ಧಿಗೆ ಯಾವುದೇ ನೆರವು ನೀಡಿಲ್ಲ. ಹೀಗಾಗಿ ಈಗ ನಾನು ಹಾಸನ ಅಭಿವೃದ್ಧಿಗೆ ಮುಂದಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...