alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಅವರಿಗೆ ಎದುರಾಯ್ತಾ ಸಂಕಷ್ಟ..?

yedy621

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗುವ ಸಂಭ್ರಮದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಹೌದು. ಲೋಕಾಯುಕ್ತ ಜಿಲ್ಲಾ ನ್ಯಾಯಾಲಯ ಭದ್ರಾವತಿ ತಾಲ್ಲೂಕು ಹುಣಸೇಕಟ್ಟೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರ ರಾಘವೇಂದ್ರ ಸೇರಿದಂತೆ ಏಳು ಜನರಿಗೆ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಶಿವಮೊಗ್ಗದ ವಕೀಲ ಬಿ. ವಿನೋದ್ ಎಂಬುವವರು ಭದ್ರಾವತಿಯಲ್ಲಿ ಅರಣ್ಯ ಭೂಮಿಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ರಾಘವೇಂದ್ರ ಸೇರಿದಂತೆ ಏಳು ಜನರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದನ್ನಿಲ್ಲಿ ಸ್ಮರಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...