alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪರ ಓಡಾಟಕ್ಕೆ ಕೋಟಿ ರೂ. ಬೆಲೆಯ ಹೊಸ ಕಾರು

Toyota_Land_Cruiser_Pradoಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ. ಪದಗ್ರಹಣ ಸಮಾರಂಭದ ವೇಳೆ, ತಾವು ಶೀಘ್ರದಲ್ಲೇ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಈಗ ಅವರ ರಾಜ್ಯ ಪ್ರವಾಸಕ್ಕೆ ಹೊಚ್ಚ ಹೊಸ ಕಾರು ಬಂದಿದೆ.

ಸುಮಾರು 1 ಕೋಟಿ ರೂ. ಬೆಲೆ ಬಾಳುವ ಟೊಯೋಟಾ ಕಂಪನಿಯ ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರನ್ನು ಖರೀದಿಸಲಾಗಿದ್ದು, ಈಗಾಗಲೇ ಇದರ ನೋಂದಣಿಯೂ ಆಗಿದೆ. ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಕಂಪನಿಯ ಹೆಸರಿನಲ್ಲಿ ಈ ಕಾರಿನ ನೋಂದಣಿಯಾಗಿದ್ದು, ಅವರೇ ಇದನ್ನು ಯಡಿಯೂರಪ್ಪನವರಿಗೆ ಉಡುಗೊರೆಯಾಗಿ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಸಂಖ್ಯಾ ಶಾಸ್ತ್ರ ಪ್ರಕಾರ ಈ ಕಾರಿಗೆ ನಂಬರ್ ಪಡೆಯಲಾಗಿದೆ ಎನ್ನಲಾಗಿದ್ದು, ಇದೇ ತಿಂಗಳ 21 ರಿಂದ ಯಡಿಯೂರಪ್ಪನವರು ಈ ಕಾರಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮಾಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವುದು ಖಚಿತವೆಂಬ ವಿಶ್ವಾಸದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...