alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಯಡಿಯೂರಪ್ಪ ಒಬ್ಬರಿಂದಲೇ ಪ್ರಮಾಣವಚನ ?

ಕರ್ನಾಟಕದಲ್ಲಿ ಯಾರಿಗೆ ಗದ್ದುಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ನಾಳೆಯೇ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗ್ತಿದೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ನಾಳೆ ಯಡಿಯೂರಪ್ಪ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರಂತೆ.

ಯಡಿಯೂರಪ್ಪನವರಿಗೆ ಸರ್ಕಾರ ರಚನೆ ಮಾಡಲು ರಾಜ್ಯಪಾಲರು ಆಹ್ವಾನ ನೀಡಲಿದ್ದಾರೆ ಎನ್ನಲಾಗ್ತಿದೆ. ಬಿಜೆಪಿ ಮೂಲಗಳು ಪ್ರಮಾಣ ವಚನ ಸ್ವೀಕಾರಕ್ಕೆ ಎಲ್ಲ ಸಿದ್ಧತೆ ನಡೆಸುತ್ತಿವೆ. ಬಹುಮತ ಸಾಬೀತಾದ ಮೇಲೆ ಮೇ 27ರ ನಂತ್ರ  ಪೂರ್ಣ ಪ್ರಮಾಣದ ಕ್ಯಾಬಿನೆಟ್ ರಚನೆಯಾಗಲಿದೆ.

ಈ ಮಧ್ಯೆ ಸಂಜೆ 5 ಗಂಟೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ರಾಜ್ಯಪಾಲರಿಗೆ ಶಾಸಕರ ಬೆಂಬಲ ಪತ್ರ ನೀಡಲಿದ್ದಾರೆ. ಸಂಜೆ ಆರು ಗಂಟೆಯೊಳಗೆ ಯಾರು ಸರ್ಕಾರ ರಚನೆ ಮಾಡ್ತಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ ಎನ್ನಲಾಗ್ತಿದೆ.

 

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...