alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪನವರ ಪುತ್ರನ ಆಸ್ತಿಯಲ್ಲಿ ಭಾರಿ ಏರಿಕೆ

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3 ರಂದು ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸಿದ್ದಾರೆ.

ಸೋಮವಾರದಂದು ಬಿ.ವೈ. ರಾಘವೇಂದ್ರ ತಮ್ಮ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಚುನಾವಣಾಧಿಕಾರಿಗಳಿಗೆ ನೀಡಿರುವ ಅಫಿಡವಿಟ್ ನಲ್ಲಿ ತಾವು ಹಾಗೂ ತಮ್ಮ ಪತ್ನಿ ಹೊಂದಿರುವ ಆಸ್ತಿ ವಿವರವನ್ನು ನೀಡಿದ್ದಾರೆ. ಅದರ ಪ್ರಕಾರ ಬಿ.ವೈ. ರಾಘವೇಂದ್ರ 67 ಕೋಟಿ ರೂಪಾಯಿ ಆಸ್ತಿಯ ಒಡೆಯರಾಗಿದ್ದಾರೆ.

2009 ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ರಾಘವೇಂದ್ರ ಅವರ ಆಸ್ತಿ ಮೌಲ್ಯ 6 ಕೋಟಿ ರೂಪಾಯಿ. 2014 ರಲ್ಲಿ ಬಿ.ವೈ. ರಾಘವೇಂದ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಿದ್ದು, ಈ ಸಂದರ್ಭದಲ್ಲಿ ಅವರ ಬಳಿ 30 ಕೋಟಿ ರೂಪಾಯಿ ಆಸ್ತಿ ಇತ್ತು. ಇದಾದ ನಾಲ್ಕು ವರ್ಷಗಳಲ್ಲಿ ಅವರ ಆಸ್ತಿ ದ್ವಿಗುಣಗೊಂಡಿದ್ದು, ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ 9 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...