alex Certify
ಕನ್ನಡ ದುನಿಯಾ       Mobile App
       

Kannada Duniya

“ಶರತ್ ಸಾವು ಪ್ರಕರಣ : ಎನ್ ಐಎ ತನಿಖೆಯಾಗಲಿ’’

images-1

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಶರತ್ ಸಾವಿನ ಬಗ್ಗೆ ಎನ್ ಐಎ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಕೋಮು ಗಲಭೆಯನ್ನು ಹುಟ್ಟುಹಾಕ್ತಿದೆ ಎಂದು ಯಡಿಯೂರಪ್ಪ ದೂರಿದ್ದಾರೆ. ಜುಲೈ 4ರಂದೇ ಶರತ್ ಮೇಲೆ ಹಲ್ಲೆಯಾಗಿದೆ. ಆದ್ರೆ ಈವರೆಗೂ ಯಾರನ್ನೂ ಬಂಧಿಸಿಲ್ಲ.  ಕಳೆದ 4 ವರ್ಷದಲ್ಲಿ ಸಂಘ ಪರಿವಾರದ 20ಕ್ಕೂ ಹೆಚ್ಚು ಮಂದಿಯ ಹತ್ಯೆಯಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ಜುಲೈ 4ರಂದು ಆರ್ ಎಸ್ ಎಸ್ ಕಾರ್ಯಕರ್ತ ಶರತ್  ಮೇಲೆ ಹಲ್ಲೆ ನಡೆದಿತ್ತು. ಶುಕ್ರವಾರ ಎ.ಜೆ.ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದರು. ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಬಂಟ್ವಾಳದಲ್ಲಿ ಕಲ್ಲು ತೂರಾಟ ನಡೆದಿದೆ.

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...