alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಎಸ್.ವೈ.ಗೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ

yeddyurappa-bjpಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಸದೀಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಬರೆದಿದ್ದರೆನ್ನಲಾದ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರು, ಕಪ್ಪ ಕಾಣಿಕೆ ನೀಡಿದ್ದ ವಿವರವಿದ್ದು, ಇದನ್ನು ಮೊದಲಿಗೆ ಬಹಿರಂಗಪಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಈಗ ರಾಷ್ಟ್ರೀಯ ವಾಹಿನಿಯೊಂದರಲ್ಲಿ ಡೈರಿಯ ಸಂಪೂರ್ಣ ವಿವರ ಬಹಿರಂಗಗೊಂಡ ಬಳಿಕ ಸರ್ಕಾರದ ವಿರುದ್ದ ಬಿಜೆಪಿಯಿಂದ ಹೋರಾಟ ನಡೆಸಲು ಸಜ್ಜಾಗಿದ್ದಾರೆ.

ಇದಕ್ಕೆ ತಿರುಗೇಟು ನೀಡಲು ಸಿದ್ದತೆ ನಡೆಸಿರುವ ಕಾಂಗ್ರೆಸ್, ಈಗಾಗಲೇ ಲೆಹರ್ ಸಿಂಗ್ ಬರೆದಿದ್ದರೆನ್ನಲಾದ ಡೈರಿಯಲ್ಲಿನ ವಿವರವನ್ನು ಬಹಿರಂಗಪಡಿಸಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದ ವೇಳೆ ಹೈಕಮಾಂಡ್ ಗೆ ಹಣ ನೀಡಲಾಗಿದೆ ಎಂದು ಆರೋಪಿಸುತ್ತಿದೆ. ಈ ಮಧ್ಯೆ ಸರ್ಕಾರದ ವಿರುದ್ದ ಮುಗಿಬಿದ್ದಿರುವ ಯಡಿಯೂರಪ್ಪನವರಿಗೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಡಿಯೂರಪ್ಪನವರ ವಿರುದ್ದ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳಿಗೆ ಮರು ಜೀವ ನೀಡುವ ಮೂಲಕ ತಿರುಗೇಟು ನೀಡಲಿದ್ದಾರೆ ಎನ್ನಲಾಗ್ತಾ ಇದೆ.

ಯಡಿಯೂರಪ್ಪನವರ ವಿರುದ್ದ ದಾಖಲಾಗಿದ್ದ 18 ಪ್ರಕರಣಗಳ ಪೈಕಿ 15 ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ಮೇಲ್ಮನವಿ ಸಲ್ಲಿಸಿದೆ. ಈ ಪ್ರಕರಣಗಳಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡುವುದರ ಜೊತೆಗೆ ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗಿದೆ. ಈ ರೀತಿ ಕಾನೂನಾತ್ಮಕವಾಗಿ ಯಡಿಯೂರಪ್ಪನವರನ್ನು ಬಗ್ಗು ಬಡಿಯುವ ಉದ್ದೇಶವನ್ನು ಸರ್ಕಾರ ಹೊಂದಿದ್ದು, ಇದರಲ್ಲಿ ಎಷ್ಟರ ಮಟ್ಟಿಗೆ ಸಫಲತೆ ಕಾಣುತ್ತದೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...