alex Certify
ಕನ್ನಡ ದುನಿಯಾ       Mobile App
       

Kannada Duniya

ಜವಾರಿ ಕೋಳಿ ತಿಂದು ದೇವಾಲಯಕ್ಕೆ ಹೋದ್ರಾ ರಾಹುಲ್ ಗಾಂಧಿ…?

‘ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ 10 ಪರ್ಸೆಂಟ್ ಸಿ.ಎಂ. ಸಿದ್ರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ಎಲೆಕ್ಷನ್ ಹಿಂದೂ ರಾಹುಲ್ ಗಾಂಧಿ ಮತ್ತೊಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾವಾದ.’

ಹೀಗೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಅವರ ಕುರಿತಾಗಿ ಯಡಿಯೂರಪ್ಪ ಆರೋಪಿಸಿದ್ದಾರೆ.

ರಾಜ್ಯ ಪ್ರವಾಸದ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೋಳಿ ತಿಂದು ಕನಕಗಿರಿ ನರಸಿಂಹಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರೆನ್ನಲಾಗಿದ್ದು, ಇದಕ್ಕೆ ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಆದರೆ, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಇದನ್ನು ಅಲ್ಲಗಳೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...