alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ವಕ್ತಾರ, ಮಾಜಿ ಸಚಿವ ಸುರೇಶ್ ಕುಮಾರ್ ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಸಂತಸದ ಗಳಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ ಎಂದಿದ್ದಾರೆ.

ಸುರೇಶ್ ಕುಮಾರ್ ಅವರ ಈ ಟ್ವೀಟ್ ನಿಂದಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದ್ದು, ಅಚ್ಚರಿಯೆಂದರೆ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಬೇಕಾಗಿದ್ದ ರಾಜಭವನದಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ರಾಜಭವನದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೊಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗುತ್ತಿದ್ದು, ಬಹುಮತ ಸಾಬೀತುಪಡಿಸಿದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...