alex Certify
ಕನ್ನಡ ದುನಿಯಾ       Mobile App
       

Kannada Duniya

ದಿಢೀರ್ ರಾಜಕೀಯ ಬೆಳವಣಿಗೆ, ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಗ್ ಶಾಕ್

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಪುತ್ರ ಡಾ. ಯತೀಂದ್ರರ ವಿರುದ್ದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರರಿಗೆ ಬಿಜೆಪಿ ವರಿಷ್ಟರು ಕೊನೆ ಗಳಿಗೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ ಶಾಕ್ ನೀಡಿದೆ.

ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ ನಾಮಪತ್ರ ಸಲ್ಲಿಸದಂತೆ ವಿಜಯೇಂದ್ರಗೆ ಬಿಜೆಪಿ ವರಿಷ್ಟರು ಸೂಚಿಸಿದ್ದಾರೆನ್ನಲಾಗಿದ್ದು, ಇಲ್ಲಿಂದ ಸ್ಪರ್ಧಿಸಲು ಜಿಲ್ಲಾ ಪಂಚಾಯತ್ ಸದಸ್ಯ ಸದಾನಂದ ಎಂಬವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ನಂಜನಗೂಡಿನಲ್ಲಿ ನಡೆದ ಸಮಾವೇಶದದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವರುಣಾದಿಂದ ಬಿ.ವೈ. ವಿಜಯೇಂದ್ರರಿಗೇ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸುತ್ತಿದ್ದು, ಮುಂದೆ ಯಾವ ನಿರ್ಧಾರ ಹೊರ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ವರುಣಾದಿಂದ ತಮಗೆ ಟಿಕೆಟ್ ಸಿಗುತ್ತದೆಂಬ ಭರವಸೆಯಿಂದ ವಿಜಯೇಂದ್ರ ಕ್ಷೇತ್ರದಲ್ಲಿ ಬಿರುಸಿನ ಪ್ರವಾಸ ಕೈಗೊಂಡಿದ್ದರು. ಜೊತೆಗೆ ಇತರೆ ಪಕ್ಷಗಳ ಕೆಲ ಪ್ರಮುಖ ನಾಯಕರನ್ನು ಭೇಟಿ ಮಾಡಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರಲ್ಲದೇ ಕ್ಷೇತ್ರದಲ್ಲಿ ವಾಸ್ತವ್ಯ ಮಾಡುವ ಸಲುವಾಗಿ ಮನೆ ಸಹ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...