alex Certify
ಕನ್ನಡ ದುನಿಯಾ       Mobile App
       

Kannada Duniya

ಬಹುಮತ ಸಾಬೀತುಪಡಿಸಲು ವಿಫಲರಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಯಡಿಯೂರಪ್ಪ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ಬಹುಮತ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ವಿಶ್ವಾಸಮತ ಯಾಚನೆಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅದರ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕ ಶಾಸಕರು ಬಿಜೆಪಿಗೆ ಬರಲು ತಯಾರಾಗಿದ್ದರು. ಆದರೆ ಸುಪ್ರೀಂ ಕೋರ್ಟ್ ಬಹುಮತ ಸಾಬೀತಿಗೆ ಕೇವಲ 24 ಗಂಟೆ ಅವಕಾಶ ನೀಡಿದ ಕಾರಣ ಆ ಶಾಸಕರುಗಳ ಮನವೊಲಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸುತ್ತಿತ್ತು. ಆದರೆ ನಾವು ಮಾಡಿದ ಕೆಲ ತಪ್ಪಿನಿಂದಾಗಿ ಸಾಧ್ಯವಾಗಲಿಲ್ಲ. ಬಾದಾಮಿಯಲ್ಲಿ ಇನ್ನೊಂದು ದಿನ ಶ್ರೀರಾಮುಲು ಪ್ರಚಾರ ಮಾಡಿದ್ದರೆ ಸಿದ್ದರಾಮಯ್ಯ ಅಲ್ಲಿಯೂ ಸೋಲನ್ನಪ್ಪುತ್ತಿದ್ದರೆಂದು ಯಡಿಯೂರಪ್ಪ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...