alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಎಸ್.ವೈ. ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ದಿಢೀರ್ ಪ್ರತಿಭಟನೆ

ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ, ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಮುಂದೆ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸದ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಯಡಿಯೂರಪ್ಪನವರ ನಿವಾಸದಲ್ಲಿದ್ದ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವರು, ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜಟಾಪಟಿಗೆ ಇಳಿದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು. ಪೋಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...