alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪನವರ ಮನೆಯಲ್ಲೀಗ ನೀರವ ಮೌನ…!

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಂದ ಗಿಜಿಗುಟ್ಟುತ್ತಿದ್ದ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿಯಲ್ಲಿನ ಧವಳಗಿರಿ ನಿವಾಸದಲ್ಲಿ ಈಗ ನೀರವ ಮೌನ ಆವರಿಸಿದೆ.

ಬಹುಮತ ಸಾಬೀತಪಡಿಸಲು ವಿಫಲರಾದ ಯಡಿಯೂರಪ್ಪನವರು, ಕೇವಲ ಮೂರು ದಿನದೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿದ್ದು, ಅಗತ್ಯ ಶಾಸಕರ ಬೆಂಬಲ ತಮಗೆ ದೊರೆಯುವುದಿಲ್ಲವೆಂಬುದು ಮನವರಿಕೆಯಾಗುತ್ತಿದ್ದಂತೆಯೇ ಯಡಿಯೂರಪ್ಪನವರು ವಿಶ್ವಾಸಮತ ಯಾಚನೆಯ ಗೊಡವೆಗೆ ಹೋಗದೆ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜೂಭಾಯ್ ವಾಲಾರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಬಳಿಕ ಪಕ್ಷದ ಕೆಲ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಯಡಿಯೂರಪ್ಪ ಮನೆಗೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ. ರಾಜಕೀಯ ಚಟುವಟಿಕೆಗಳಿಂದ ಬಿಡುವು ಸಿಕ್ಕ ಬಳಿಕ ಯಡಿಯೂರಪ್ಪನವರು ಇಂದು ಬೆಳಿಗ್ಗೆ ವಾಕಿಂಗ್ ಮುಗಿಸಿಕೊಂಡು ಬಂದಿದ್ದಾರೆ. ಪಕ್ಷದ ನಾಯಕರನ್ನು ತಮ್ಮ ನಿವಾಸದಲ್ಲೇ ಭೇಟಿ ಮಾಡುವ ಸಾಧ್ಯತೆಯಿದ್ದು, ಮುಂದೆ ಕೈಗೊಳ್ಳಬೇಕಾದ ರಾಜಕೀಯ ನಡೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...