alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿ ಸರ್ಕಾರಕ್ಕೆ ಕುತ್ತು ತರುತ್ತಾ ಹೆಚ್.ಡಿ.ಕೆ.- ಸಿದ್ದರಾಮಯ್ಯ ಜಟಾಪಟಿ?

ಇದುವರೆಗೆ ಆಂತರಿಕವಾಗಿ ನಡೆಯುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವಿನ ಜಟಾಪಟಿ ಈಗ ಬಹಿರಂಗಕ್ಕೆ ಬಂದಿದೆ. ಬಜೆಟ್ ಮಂಡನೆ ಕುರಿತು ಸಿದ್ದರಾಮಯ್ಯನವರು ತಮ್ಮ ಆಪ್ತ ಶಾಸಕರೊಂದಿಗೆ ಆಡಿರುವ ಕೆಲ ಮಾತುಗಳು ಕುಮಾರಸ್ವಾಮಿಯವರ ಆಕ್ರೋಶಕ್ಕೆ ಕಾರಣವಾಗಿದೆ.

ಹೀಗಾಗಿಯೇ ಕುಮಾರಸ್ವಾಮಿಯವರು ಸಿದ್ದರಾಮಯ್ಯನವರ ಹೆಸರನ್ನು ಹೇಳದೆ ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸರ್ಕಾರದ ಆಯಕಟ್ಟಿನ ಜಾಗದಲ್ಲಿದ್ದ ಕೆಲ ಸಿದ್ದರಾಮಯ್ಯ ಬೆಂಬಲಿಗ ಅಧಿಕಾರಿಗಳನ್ನು ವರ್ಗಾಯಿಸುವ ಮೂಲಕ ಸಮರ ಸಾರಿದ್ದಾರೆ.

ಈ ಎಲ್ಲ ಬೆಳವಣಿಗೆಗಳು ಜುಲೈ 5 ರ ಬಜೆಟ್ ಮಂಡನೆ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದ್ದು, ಜೊತೆಗೆ ಮೈತ್ರಿಕೂಟದ ಸರ್ಕಾರದ ಮುಂದಿನ ಭವಿಷ್ಯ ಡೋಲಾಯಮಾನವಾಗಲಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಈ ಅನುಮಾನಗಳಿಗೆ ಪುಷ್ಟಿ ನೀಡುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗುಜರಾತ್ ನ ಅಹಮದಾಬಾದ್ ಗೆ ತೆರಳಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೊಡನೆ ಮಾತುಕತೆ ನಡೆಸಿದ್ದು, ಮೈತ್ರಿ ಕೂಟ ಸರ್ಕಾರ ಪತನವಾದರೆ ಸರ್ಕಾರ ರಚಿಸಲು ಬಿಜೆಪಿ ಉತ್ಸುಕವಾಗಿದೆ ಎಂಬ ಮಾತುಗಳು ಕೇಳಿಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...