alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಬಿಗಿ ಭದ್ರತೆ

ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಆರೋಪಿಸಿ ಇಂದು ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕರ್ತರು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸದ ಮುಂದೆ ಧಿಡೀರ್ ಪ್ರತಿಭಟನೆ ನಡೆಸಿದ್ದರು.

ಈ ಸಂದರ್ಭದಲ್ಲಿ ಧವಳಗಿರಿ ನಿವಾಸದ ಬಳಿ ಇದ್ದ ಯಡಿಯೂರಪ್ಪ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿತ್ತು. ಆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರು ಯಡಿಯೂರಪ್ಪನವರನ್ನು ಪತ್ರಿಕಾಗೋಷ್ಠಿಗೆ ಬರದಂತೆ ತಡೆಯಲು ಈ ಯತ್ನ ನಡೆಸಲಾಗಿತ್ತು ಎಂದು ಆರೋಪಿಸಿದ್ದರು.

ಇದೀಗ ಯಡಿಯೂರಪ್ಪನವರ ಧವಳಗಿರಿ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದ್ದು, ಎರಡು ಕೆ.ಎಸ್.ಆರ್.ಪಿ. ತುಕಡಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡುವವರ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...