alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರ ಕ್ಷೇತ್ರದ ಸೋಲಿನ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದೇನು?

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿರುವ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಕೊನೆ ಕ್ಷಣದಲ್ಲಿ ಮೈತ್ರಿ ಮಾಡಿಕೊಂಡ ಪರಿಣಾಮ ನಾವು ಸೋಲಬೇಕಾಯಿತು ಎಂದಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿ ಪ್ರಹ್ಲಾದ್ ಬಾಬು ಹೊಸ ಮುಖ. ಜನರಿಗೆ ಅವರ ಪರಿಚಯ ಅಷ್ಟಾಗಿ ಇರಲಿಲ್ಲ. ಆದರೂ ಜಯನಗರ ಕ್ಷೇತ್ರದ ಜನತೆ ಬಿಜೆಪಿಗೆ ಅತ್ಯಧಿಕ ಮತಗಳನ್ನು ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣಕರ್ತರಾದ ಮತದಾರರಿಗೆ ಅಭಿನಂದಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...