alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಜಗಳಕ್ಕೂ-ಬಿಜೆಪಿಗೂ ಯಾವುದೇ ಸಂಬಂಧವಿಲ್ಲ- ಬಿ.ಎಸ್.ವೈ.

ತುಮಕೂರು: ಕಾಂಗ್ರೆಸ್ ಒಳಜಗಳಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ಕೇವಲ ವಿಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯಡಿಯೂರಪ್ಪ, ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಉರುಳಿಸುವ ಬಗ್ಗೆ ನಾವು ಯಾವುದೇ ರೀತಿಯ ತಂತ್ರವನ್ನೂ ಮಾಡುತ್ತಿಲ್ಲ. ಕಾಂಗ್ರೆಸ್ ನಲ್ಲಿ ಉಂಟಾಗಿರುವ ಒಳ ಜಗಳಗಳಿಗೂ ನಮಗೂ ಯಾವುದೇ ಸಂಬಂಧವೂ ಇಲ್ಲ. ಅನಗತ್ಯವಾಗಿ ಬಿಜೆಪಿ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದರು.

ಅಲ್ಲದೇ ಬಿಜೆಪಿ ಸಮ್ಮಿಶ್ರ ಸರ್ಕಾರ ಬೀಳಿಸುವ ನಿಟ್ಟಿನಲ್ಲಿ ಆಪರೇಷನ್ ಕಮಲ ನಡೆಸಿ, ಕಿಂಗ್ ಪಿನ್ ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಗಂಭೀರ ಆರೋಪವನ್ನು ಸಿಎಂ ಕುಮಾರಸ್ವಾಮಿ ಮಾಡುತ್ತಿದ್ದಾರೆ. ಇದು ಬಿಜೆಪಿ ವಿರುದ್ಧ ನಡೆಸುತ್ತಿರುವ ಒಂದು ಷಡ್ಯಂತ್ರವಾಗಿದೆ ಎಂದು ಕಿಡಿ ಕಾರಿದರು.

ಇನ್ನು ಜಾರಕಿಹೊಳಿ ಟೀಂ ಬಿಜೆಪಿಗೆ ಬರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿ.ಎಸ್.ವೈ. ನಾನು ಇದುವರೆಗೂ ಜಾರಕಿಹೊಳಿ ಸಹೋದರರ ಕುರಿತು ಒಂದೇ ಒಂದು ಶಬ್ದ ಮಾತನಾಡಿಲ್ಲ ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...