alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ವಿರುದ್ಧ ಯೋಗಿ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನ ವಿಜಯನಗರದ ಬಿ.ಜಿ.ಎಸ್. ಮೈದಾನದಲ್ಲಿ ನಡೆಯುತ್ತಿರುವ ಬಿ.ಜೆ.ಪಿ. ಪರಿವರ್ತನಾ ಸಮಾವೇಶದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್, ತ್ರಿವಳಿ ತಲಾಖ್ ಮಸೂದೆಗೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ 22 ಹಿಂದೂ ಮುಖಂಡರ ಕಗ್ಗೊಲೆಯಾಗಿದೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎಂಬುದಕ್ಕೆ ಕನ್ನಡಿಯಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಾನು ಹಿಂದೂ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ.

ಬಿ.ಜೆ.ಪಿ. ಸರ್ಕಾರದ ಅವಧಿಯಲ್ಲಿ ಗೋಹತ್ಯೆ ನಿಷೇಧವನ್ನು ಜಾರಿಗೆ ತರಲಾಗಿತ್ತು. ಕರ್ನಾಟಕ ಹನುಮಾನ್ ನೆಲೆಸಿದ ಭೂಮಿಯಾಗಿದೆ. ಶ್ರೀರಾಮಚಂದ್ರನ ವಿಜಯಕ್ಕೆ, ರಾಮರಾಜ್ಯ ಸ್ಥಾಪನೆಯಲ್ಲಿ ಹನುಮಾನ್ ಪ್ರಮಖವಾದ ಪಾತ್ರ ವಹಿಸಿದ್ದು, ಕರ್ನಾಟಕದಲ್ಲಿ ರಾಮರಾಜ್ಯ ನಿರ್ಮಾಣಕ್ಕೆ ಬಿ.ಜೆ.ಪಿ.ಯನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿಯವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳೆಲ್ಲಾ ಉತ್ತರ ಪ್ರದೇಶದಲ್ಲಿ ಯಶಸ್ವಿಯಾಗಿವೆ. ರಾಜ್ಯದಲ್ಲಿ ಬಿ.ಜೆ.ಪಿ.ಯನ್ನು ಬೆಂಬಲಿಸಿ. ಅಭಿವೃದ್ಧಿಯ ಪಥದತ್ತ ಮುನ್ನಡೆಯಲು ಬೆಂಬಲ ನೀಡಬೇಕೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...