alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಯೋಗಿ ಆದಿತ್ಯನಾಥ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಭಾಗವಹಿಸಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಹವಾಮಾನ ವೈಪರೀತ್ಯದ ಕಾರಣ ರಾತ್ರಿಯೇ ಅವರು ಆಗಮಿಸಿದ್ದು, ಕುಂಬಳಗೋಡಿನ ಆದಿಚುಂಚನಗಿರಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಬೆಂಗಳೂರಿನ ವಿಜಯನಗರದ ಬಿ.ಜಿ.ಎಸ್. ಮೈದಾನದಲ್ಲಿ ಬಿ.ಜೆ.ಪಿ. ಪರಿವರ್ತನಾ ಸಮಾವೇಶ ನಡೆಯಲಿದ್ದು, ಬೆಳಿಗ್ಗೆ 11.15 ಕ್ಕೆ ಯೋಗಿ ಭಾಷಣ ಮಾಡಲಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯ 10 ಕ್ಷೇತ್ರಗಳ ಸಮಾವೇಶ ಇದಾಗಿದ್ದು, 30,000 ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಅನಂತ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...