alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಿಂದ ವಿಮಾನವೇರಲು ಬೇಕಾಗಿಲ್ಲ ಬೋರ್ಡಿಂಗ್‌ ಪಾಸ್‌

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಲ್ಫ್‌ ಬೋರ್ಡಿಂಗ್‌ ತಂತ್ರಜ್ಞಾನ ಅಳವಡಿಸಲಾಗುತ್ತಿದೆ.

ಅತ್ಯಾಧುನಿಕ ಬಯೊಮೆಟ್ರಿಕ್ ವ್ಯವಸ್ಥೆ ಮೂಲಕ ಈ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ವಿಶನ್ ಬಾಕ್ಸ್‌ ಸಂಸ್ಥೆಯ ಸಹಯೋಗದಲ್ಲಿ ಕಾಗದ ರಹಿತ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೊಳ್ಳಲಿದೆ.

2019ರ ಏಪ್ರಿಲ್ ವೇಳೆಗೆ ಮೊದಲ ಹಂತದ ಅಳವಡಿಕೆಯಾಗಲಿದ್ದು, ಆರಂಭದಲ್ಲಿ ಜೆಟ್‌ ಏರ್‌ವೇಸ್‌, ಸ್ಪೈಸ್‌ ಜೆಟ್‌ ಮತ್ತು ಏರ್ ಏಷ್ಯಾ ಸಂಸ್ಥೆಗಳ ಪ್ರಯಾಣಿಕರಿಗೆ ಈ ಸೌಲಭ್ಯ ಲಭ್ಯವಾಗಲಿದೆ.

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಡಿಜಿಟಲ್ ಇಂಡಿಯಾ ಮತ್ತು ಡಿಜಿಯಾತ್ರಾ ಯೋಜನೆ ಅಡಿ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಕಿರಿಕಿರಿ ರಹಿತ, ತ್ವರಿತ ಸೇವೆ ನೀಡುವ ಉದ್ದೇಶದಿಂದ ಬಯೋಮೆಟ್ರಿಕ್ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಇದರಿಂದ ಬೋರ್ಡಿಂಗ್ ಪಾಸ್ ಪಡೆಯಲು ಕ್ಯೂ ನಿಲ್ಲುವ ತೊಂದರೆ ತಪ್ಪಲಿದ್ದು, ಒಮ್ಮೆ ಪ್ರಯಾಣಿಕ ವ್ಯವಸ್ಥೆಯಡಿ ನೋಂದಾಯಿಸಿಕೊಂಡರೆ ಮತ್ತೆ ಅದನ್ನು ಪ್ರತಿ ಪ್ರಯಾಣದ ಸಂದರ್ಭದಲ್ಲಿ ಬಳಸಬಹುದಾಗಿದೆ. ಹೀಗಾಗಿ ಮುಖವೇ ಬೋರ್ಡಿಂಗ್ ಪಾಸ್ ಆಗಲಿದ್ದು, ಪೇಪರ್‌ರಹಿತ ವಿಮಾನ ನಿಲ್ದಾಣ ಮತ್ತು ಪ್ರಯಾಣಕ್ಕೆ ಅನುಕೂಲವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...