alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿ ಕಿಡ್ನಾಪ್ ಗೆ ಯತ್ನಿಸಿ ಪೊಲೀಸರ ಅತಿಥಿಯಾದ ಯುವಕ

ಮದುವೆಯಾಗಲು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯನ್ನು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

ಸುನೀಲ್ (26) ಎಂಬ ಯುವಕ ಎಂಜಿನಿಯರಿಂಗ್ ಓದುತ್ತಿದ್ದ ಯುವತಿಯನ್ನು ಹಲವು ದಿನಗಳಿಂದ ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದಕ್ಕೆ ಯುವತಿ ಒಪ್ಪಿರಲಿಲ್ಲ. ಅಲ್ಲದೇ ಯುವಕನ ಕಾಟ ಹೆಚ್ಚಾದಾಗ ಯುವತಿ ಮನೆಯಲ್ಲಿ ತಿಳಿಸಿದ್ದಳು. ಯುವತಿಯ ಮನೆಯವರು ಯುವಕನಿಗೆ ಹಲವು ಬಾರಿ ಬೈದು ಬುದ್ದಿ ಹೇಳಿ ಯುವತಿ ವಿಚಾರಕ್ಕೆ ಬಾರದಂತೆ ಎಚ್ಚರಿಸಿದ್ದರೆನ್ನಲಾಗಿದೆ.

ಆದರೂ ಬಗ್ಗದ ಸುನಿಲ್ ಯುವತಿಯನ್ನೇ ಕಿಡ್ನಾಪ್ ಮಾಡುವ ಪ್ಲಾನ್ ಹಾಕಿ ತನ್ನ ಕೆಲ ಸ್ನೇಹಿತರ ಜತೆಗೂಡಿ ಕಾರಿನಲ್ಲಿ ಬಂದಿದ್ದಾನೆ. ಯುವತಿ ತಾಯಿ ಮತ್ತು ಸಹೋದರನ ಜತೆ ಹೋಗುತ್ತಿದ್ದಾಗ ಏಕಾಏಕಿ ಬಂದ ಸುನೀಲ್ ಇಬ್ಬರ ಮೇಲೂ ಹಲ್ಲೆ ನಡೆಸಿ ಯುವತಿಯನ್ನು ಕಾರಿನಲ್ಲಿ ಅಪಹರಿಸಲು ಯತ್ನಿಸಿದ್ದಾನೆ. ಇದನ್ನು ಕಂಡ ಗ್ರಾಮಸ್ಥರು ಯುವತಿಯನ್ನು ರಕ್ಷಿಸಿದ್ದಾರೆ. ಯುವತಿ ಅಪಹರಣಕ್ಕೆ ವಿಫಲನಾದ ಸುನೀಲ್ ಹಾಗೂ ಸ್ನೇಹಿತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಆರೋಪಿ ಸುನೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...