alex Certify
ಕನ್ನಡ ದುನಿಯಾ       Mobile App
       

Kannada Duniya

ಪಾದಚಾರಿ ಜೀವಕ್ಕೆ ಕಂಟಕವಾಯ್ತು ಯುವಕರ ಜಾಲಿ ರೈಡ್

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಬೈಕ್ ವ್ಹೀಲಿಂಗ್, ಜಾಲಿ ರೈಡ್ ಕ್ರೇಜು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೋಜು-ಮಸ್ತಿ ಹೆಸರಲ್ಲಿ ಅಪಾಯಕಾರಿಯಾಗಿ ವಾಹನ ಚಲಾಯಿಸಿ, ತಮ್ಮ ಪ್ರಾಣದ ಜತೆಗೆ ಸಾರ್ವಜನಿಕರ ಜೀವದ ಜತೆಯೂ ಚೆಲ್ಲಾಟವಾಡುವ ಈ ಕ್ರಮಕ್ಕೆ ಕಡಿವಾಣ ಹಾಕಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಪೊಲೀಸರ ಕಣ್ಣು ತಪ್ಪಿಸಿ ಅಲ್ಲೊಂದು- ಇಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇದೆ.

ವೀಕೆಂಡ್ ಮಜಾ ಅನುಭವಿಸಲು ವಿಲಾಸಿ ಕೆ.ಟಿ.ಎಂ. ಬೈಕ್ ನಲ್ಲಿ ಜಾಲಿ ರೈಡ್ ಹೊರಟ ಯುವಕರ ಗುಂಪು ಪಾದಚಾರಿಯೊಬ್ಬರಿಗೆ ಡಿಕ್ಕಿಹೊಡೆದಿರುವ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿ ನೆಲಮಂಗಲ-ಮಂಗಳೂರು 48 ರ ಕುಡ್ಲೂರು ಬಳಿ ನಡೆದದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಪಾದಚಾರಿ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದಪ್ಪ ಸ್ಥಿತಿ ಚಿಂತಾಜನಕವಾಗಿದ್ದು, ಯುವಕರ ಜಾಲಿ ರೈಡ್ ಕ್ರೇಜ್ ಪಾದಚಾರಿ ಜೀವಕ್ಕೆ ಕುತ್ತು ತಂದಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುವಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...