alex Certify
ಕನ್ನಡ ದುನಿಯಾ       Mobile App
       

Kannada Duniya

‘ಇನ್ನೂ ಹಲವು JDS ಶಾಸಕರು ಕಾಂಗ್ರೆಸ್ ಗೆ’

zameer-dd

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಶಾಸಕ ಜಮೀರ್ ಅಹಮ್ಮದ್ ತಿಳಿಸಿದ್ದಾರೆ.

ತಮ್ಮ ರಾಜೀನಾಮೆ ಕೇಳಲು ಜೆ.ಡಿ.ಎಸ್. ನಾಯಕರಿಗೆ ನೈತಿಕತೆ ಇಲ್ಲ. ಕ್ಷೇತ್ರದ ಜನರು 5 ವರ್ಷದ ಅವಧಿಗೆ ನನ್ನನ್ನು ಚುನಾಯಿಸಿದ್ದಾರೆ. ಜನರ ತೀರ್ಮಾನವನ್ನು ಗೌರವಿಸುವೆ. ಬೇಕಾದರೆ ತಮ್ಮನ್ನು ಪಕ್ಷದಿಂದ ಉಚ್ಚಾಟಿಸಲಿ ಎಂದು ಹೇಳಿದ್ದಾರೆ.

ಜೆ.ಡಿ.ಎಸ್. ಪಕ್ಷದ 7 ಮಂದಿ ಭಿನ್ನಮತೀಯ ಶಾಸಕರು ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿರುವ ಕುರಿತು ಪ್ರತಿಕ್ರಿಯೆ ನೀಡಿದ ಜಮೀರ್ ಅಹಮ್ಮದ್, ಆಗಸ್ಟ್ 17 ರಂದು 7 ಮಂದಿ ಭಿನ್ನಮತೀಯ ಶಾಸಕರು ದೆಹಲಿಗೆ ತೆರಳಲಿದ್ದೇವೆ. ಎ.ಐ.ಸಿ.ಸಿ. ಅಧ್ಯಕ್ಷರಾದ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರೊಂದಿಗೆ ದೆಹಲಿಗೆ ತೆರಳಲಿದ್ದೇವೆ. ತಾಂತ್ರಿಕ ಕಾರಣಗಳಿಂದ ಈಗಲೇ ಕಾಂಗ್ರೆಸ್ ಸೇರ್ಪಡೆ ಸಾಧ್ಯವಿಲ್ಲ. ಈಗ ಮಾತುಕತೆ ನಡೆಸಿ, ಡಿಸೆಂಬರ್ ನಲ್ಲಿ ಸೇರಲಿದ್ದೇವೆ. ಫೆಬ್ರವರಿಯಲ್ಲಿ ಇನ್ನೂ ಕೆಲವು ಜೆ.ಡಿ.ಎಸ್. ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...