alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಸಿಎಂ ಆಗುವುದು ಕನಸಿನ ಮಾತು ಎಂದ ಜಮೀರ್ ಅಹಮದ್

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕುರಿತು ಕನಸು ಕಾಣುತ್ತಿದ್ದಾರೆ. ಕನಸು ಕಾಣುವುದು ತಪ್ಪಲ್ಲ. ಆದರೆ ಹಗಲು ಕನಸು ಕಾಣಬೇಡಿ. ನೀವು ಎಷ್ಟೇ ತಿಪ್ಪರಲಾಗ ಹಾಕಿದರೂ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಿಲ್ಲವೆಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಐದು ವರ್ಷ ಪೂರೈಸುತ್ತದೆ. ಮುಖ್ಯ ಮಂತ್ರಿಯಾಗುವ ಯಡಿಯೂರಪ್ಪನವರ ಕನಸು ಯಾವುದೇ ಕಾರಣಕ್ಕೂ ಕೈಗೂಡುವುದಿಲ್ಲವೆಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಅಲ್ಲಿ ರಾಮ ಮಂದಿರ, ಮಸೀದಿ ಎರಡೂ ನಿರ್ಮಾಣವಾಗಲಿ. ಬಿಜೆಪಿಯವರಿಗೆ ಚುನಾವಣೆ ಬಂದಾಗ ಮಾತ್ರ ಇದು ಪ್ರಚಾರದ ವಿಷಯವಾಗದಿರಲಿ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...