alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ: ಕೊನೆ ದಿನದ ಕರಾಮತ್ತು ಶುರು

evm-21

ಬಹು ನಿರೀಕ್ಷೆಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಕೆಲ ಜಿಲ್ಲೆಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಕೊನೆ ಕ್ಷಣದ ಕಸರತ್ತು ನಡೆಯುತ್ತಿದೆ. ಶಾಂತಿಯುತ ಹಾಗೂ ಸುಗಮವಾಗಿ ಚುನಾವಣೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಮತಗಟ್ಟೆಗೆ ನಿಯೋಜಿಸಲ್ಪಟ್ಟ ಸಿಬ್ಬಂದಿ ಇಂದು ತಮಗೆ ವಹಿಸಿದ ಚುನಾವಣೆ ಪರಿಕರಗಳನ್ನು ತೆಗೆದುಕೊಂಡು ಮಸ್ಟರಿಂಗ್ ಕೇಂದ್ರಗಳಿಂದ ಹೊರಟಿದ್ದಾರೆ. ಅವರಿಗೆ ಮತಗಟ್ಟೆಯಲ್ಲಿ ಬಳಸುವ ಮತಯಂತ್ರ ಸೇರಿದಂತೆ ಅಗತ್ಯ ವಸ್ತುಗಳನ್ನು ವಹಿಸಲಾಗಿದೆ.

ಈ ಮಧ್ಯೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಬೆನ್ನಲ್ಲೇ ಅಭ್ಯರ್ಥಿಗಳಿಂದ ತೆರೆಮರೆಯ ಕಸರತ್ತು ಆರಂಭವಾಗಿದೆ. ಮನೆ ಮನೆ ಪ್ರಚಾರ ಮಾಡುತ್ತಿರುವ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರನ್ನು ಓಲೈಸಲು ನಾನಾ ತಂತ್ರಗಳ ಮೊರೆ ಹೋಗಿದ್ದಾರೆ.

ಕೊನೆಕ್ಷಣದಲ್ಲಿ ಹಣ, ಮದ್ಯ ಹಂಚಿಕೆ ಪ್ರಕ್ರಿಯೆ ಜೋರಾಗುವುದರಿಂದ ಚುನಾವಣಾ ಆಯೋಗ ಕೂಡ ಹದ್ದಿನಕಣ್ಣು ಇಟ್ಟಿದೆ. ಯಾವುದೇ ರೀತಿಯ ಅಕ್ರಮ ನಡೆಯದಂತೆ ತಡೆಯಲು ಕ್ರಮಕೈಗೊಳ್ಳಲಾಗಿದೆ. ಆದರೂ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರನ್ನು ಓಲೈಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ.

ರಾಜಕೀಯ ಪಕ್ಷಗಳಿಗೂ ಕೂಡ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆಗಳಿಗೆ ಅನುಕೂಲವಾಗುವುದರಿಂದ ಹೆಚ್ಚಿನ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ನಡೆಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...