alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಜಪೇಟೆಯಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್

ಬೆಂಗಳೂರು : ಕೊಡಗು ಜಿಲ್ಲೆ ವಿರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪದ್ಮಿನಿ ಪೊನ್ನಪ್ಪ ಜೆ.ಡಿ.ಎಸ್.ಗೆ ಸೇರ್ಪಡೆಯಾಗಿದ್ದಾರೆ.

ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಕಾಂಗ್ರೆಸ್ ತೊರೆದು ಜೆ.ಡಿ.ಎಸ್.ಗೆ ಸೇರಿದ್ದಾರೆ.

ಬೆಂಗಳೂರು ಪದ್ಮನಾಭನಗರದಲ್ಲಿ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಪಕ್ಷವನ್ನು ಸೇರಿದ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

3 ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿರುವ ತಮಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ಜೆ.ಡಿ.ಎಸ್. ಅಭ್ಯರ್ಥಿ ಸಂಕೇತ್ ಪೂವಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಇಂದು ಜೆ.ಡಿ.ಎಸ್.ಗೆ ಸೇರ್ಪಡೆಯಾಗಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...