alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಎ.ಸಿ.ಬಿ. ಅಧಿಕಾರಿಗಳ ಶಾಕ್

ಭ್ರಷ್ಟಾಚಾರ ನಿಗ್ರಹದಳ(ಎ.ಸಿ.ಬಿ.) ಅಧಿಕಾರಿಗಳು ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆಯಲ್ಲಿ ಶ್ರೀನಿವಾಸಪುರ ತಾಲ್ಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಮುನಿವೆಂಕಟಪ್ಪ ಅವರ ನಿವಾಸದ ಮೇಲೆ ದಾಳಿ ಮಾಡಿ, ದಾಖಲೆ ಪರಿಶೀಲನೆ ನಡೆಸಲಾಗಿದೆ. ಆದಾಯ ಮೀರಿ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ಎ.ಸಿ.ಬಿ. ಡಿ.ವೈ.ಎಸ್.ಪಿ. ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಚಿತ್ರದುರ್ಗದ ಕಾಮನಬಾವಿಯಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮಿಪತಿ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗಿದೆ. ಲಕ್ಷ್ಮಿಪತಿ ಅವರ ಸ್ವಗ್ರಾಮ ಮನಮೈನಹಟ್ಟಿಯಲ್ಲಿಯೂ ದಾಳಿ ನಡೆದಿದೆ. ಎ.ಸಿ.ಬಿ. ಡಿ.ವೈ.ಎಸ್.ಪಿ. ಜಿ. ಮಂಜುನಾಥ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...