alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಆರ್.ಎಸ್.ನಲ್ಲಿ 3 ಪ್ರವಾಸಿಗರು ಸಾವು, ಪ್ರವೇಶ ನಿಷೇಧ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬಿರುಗಾಳಿ ಮಳೆಯ ಆರ್ಭಟದಿಂದ ಭಾರೀ ಹಾನಿ ಉಂಟಾಗಿದೆ. ಕೆ.ಆರ್.ಎಸ್.ನಲ್ಲಿ ಮರಗಳು ಬಿದ್ದು ಮೂವರು ಪ್ರವಾಸಿಗರು ಮೃತಪಟ್ಟಿದ್ದು, 2 ದಿನಗಳ ಕಾಲ ಪ್ರವೇಶ ನಿಷೇಧಿಸಲಾಗಿದೆ.

ವಿಶ್ವವಿಖ್ಯಾತ ಕೆ.ಆರ್.ಎಸ್. ಬೃಂದಾವನದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುರಂತ ನಡೆದಿದೆ. ಬಿರುಗಾಳಿ ಸಹಿತ ಭಾರೀ ಮಳೆಯಾದ ಕಾರಣ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಮರದಡಿಗೆ ಸಿಲುಕಿ ಮೂವರು ಪ್ರವಾಸಿಗರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಿದ್ದ ಮರಗಳ ತೆರವು ಕಾರ್ಯಾಚರಣೆ ಕೈಗೊಂಡ ಹಿನ್ನಲೆಯಲ್ಲಿ 2 ದಿನಗಳ ಕಾಲ ಬೃಂದಾವನಕ್ಕೆ ಪ್ರವಾಸಿಗರಿಗೆ ಪ್ರವೇಶವಿರುವುದಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...