alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ಮೋದಿ ಹೇಳಿದ್ದೇನು ಗೊತ್ತಾ…?

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬಿ.ಜೆ.ಪಿ. ಮಹಿಳಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ.

ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದ ಮೋದಿ, ಇದಕ್ಕೆ ಪೂರಕವಾಗಿ ಈಗಾಗಲೇ ಪಕ್ಷದ ಅಭ್ಯರ್ಥಿಗಳು, ರೈತ ಮೋರ್ಚಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಮಹಿಳಾ ಮೋರ್ಚಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಯಾದ ಯೋಜನೆಗಳನ್ನು ಜನ ಸ್ಮರಿಸುತ್ತಾರೆ. ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಕರ್ನಾಟಕದಲ್ಲಿ ದೊಡ್ಡ ಪರಿಣಾಮವನ್ನೇ ಬೀರಿದೆ ಎಂದು ಹೇಳಿದ್ದಾರೆ.

ಚೀನಾದಲ್ಲಿ ಇತ್ತೀಚೆಗೆ ನಡೆದ ಶಾಂಘಾಯ್ ಸಭೆಯಲ್ಲಿ ಭಾರತದ ಮಹಿಳೆಯರು ಗಮನ ಸೆಳೆದಿದ್ದಾರೆ. ಸಚಿವೆಯರಾದ ಸುಷ್ಮ ಸ್ವರಾಜ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಚುನಾವಣೆಯಲ್ಲಿ ನಾವು ಮೊದಲು ಬೂತ್ ಗಳನ್ನು ಗೆಲ್ಲಬೇಕು. ಬೂತ್ ಗಳನ್ನು ಗೆದ್ದರೆ, ವಿಧಾನಸಭೆ ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಗ್ರಾಮೀಣ ಮಿಷನ್ ಅಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ನೀಡಿದ ಸಾಲದ ಮೊತ್ತ ಹೆಚ್ಚಳವಾಗಿದೆ. ಮುದ್ರಾ ಯೋಜನೆಯಲ್ಲಿ 9 ಕೋಟಿ ಮಹಿಳೆಯರಿಗೆ ಸಾಲ ವಿತರಿಸಲಾಗಿದೆ. ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಮಹಿಳಾ ಪರ ಯೋಜನೆಗಳು ಬಿ.ಜೆ.ಪಿ.ಯ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಜನಧನ ಯೋಜನೆಯಲ್ಲಿ 16.42 ಕೋಟಿ ಮಹಿಳೆಯರು ಫಲಾನುಭವಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮಹಿಳಾ ದೌರ್ಜನ್ಯವನ್ನು ತಡೆಗಟ್ಟಬೇಕೆಂದರೆ, ಮೊದಲು ನಮ್ಮ ಮಕ್ಕಳು ಬೆಳೆಯುವ ಪರಿಸರವನ್ನು ಸರಿಪಡಿಸಬೇಕಿದೆ. ಶಾಲೆ, ಬೆಳೆಯುವ ಪರಿಸರವನ್ನು ಸಂಸ್ಕಾರಯುತವಾಗಿ ಮಾಡಿ ಸರಿಯಾಗಿ ಗಮನ ನೀಡಿದಲ್ಲಿ ದೌರ್ಜನ್ಯ ತಡೆಯಬಹುದು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...