alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಗೆಲುವಿನ ಕುರಿತು ಮೋದಿ ಹೇಳಿದ್ದೇನು ಗೊತ್ತಾ..?

ಬಿ.ಜೆ.ಪಿ. ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆ ಸಭೆಯಲ್ಲಿ ವಿಜಯೋತ್ಸವ ಭಾಷಣ ಮಾತನಾಡಿದ ಅವರು, ತಾವು ಪ್ರತಿನಿಧಿಸುತ್ತಿರುವ ವಾರಣಾಸಿ ಕ್ಷೇತ್ರದಲ್ಲಿ ಫ್ಲೈಓವರ್ ಕುಸಿದು ಹಲವರು ಸಾವನ್ನಪ್ಪಿದ್ದು, ಉತ್ತರ ಪ್ರದೇಶ ಸಿ.ಎಂ. ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿ.ಜೆ.ಪಿ. ಗೆಲುವು ಕಂಡಿದೆ. ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಇದರ ಹಿಂದೆ ಹಲವರ ಶ್ರಮವಿದೆ. ಕರ್ನಾಟಕದ ಮತದಾರರು ನಮ್ಮನ್ನು ಬೆಂಬಲಿಸಿದ್ದಾರೆ. ಅಮಿತ್ ಶಾ ಉತ್ತಮ ರಣನೀತಿ ರೂಪಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಚುನಾವಣೆಯಲ್ಲಿ ಸೋತರೂ ಜೆ.ಡಿ.ಎಸ್. ಮೂಲಕ ಕಾಂಗ್ರೆಸ್ ಅಧಿಕಾರ ಹಿಡಿಯಲು ಪ್ರಯತ್ನ ನಡೆಸಿದೆ ಎಂದು ಟೀಕಿಸಿದ್ದಾರೆ.  ಬಿ.ಜೆ.ಪಿ. ಉತ್ತರ ಭಾರತದ ಪಾರ್ಟಿ ಎಂಬ ಟೀಕೆಗಳಿಗೆ ಕರ್ನಾಟಕದ ಜನ ಉತ್ತರ ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...