alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲು ವಿರುದ್ಧ ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ

ಬಳ್ಳಾರಿ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೇ ಬಿ.ಜೆ.ಪಿ. ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಅವರ ಬೆಂಬಲಿಗರು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮೊಳಕಾಲ್ಮೂರಿನಿಂದ ಸುಮಾರು 30 ಬಸ್ ಮತ್ತು 30 ಕಾರುಗಳಲ್ಲಿ ಆಗಮಿಸಿದ್ದ ತಿಪ್ಪೇಸ್ವಾಮಿ ಬೆಂಬಲಿಗರು, ಸಂಸದ ಶ್ರೀರಾಮುಲು ಅವರು, ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡದೇ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಶ್ರೀರಾಮುಲು ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ತಿಪ್ಪೇಸ್ವಾಮಿ ಅವರ ಬೆಂಬಲಿಗರನ್ನು ಬಳ್ಳಾರಿಯ ಹೊರವಲಯದಲ್ಲೇ ಪೊಲೀಸರು ತಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರು, ರ್ಯಾಪಿಡ್ ಆಕ್ಷನ್ ಫೋರ್ಸ್ ನಿಯೋಜಿಸಲಾಗಿದೆ. ತಿಪ್ಪೇಸ್ವಾಮಿ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿರುವ ಶ್ರೀರಾಮುಲು ಸ್ಪರ್ಧೆಯಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ, ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...