alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲು ಗೆಲುವಿಗೆ ಪಣತೊಟ್ಟ ರೆಡ್ಡಿ ಭರ್ಜರಿ ಪ್ರಚಾರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಂಸದ ಶ್ರೀರಾಮುಲು ಬಿ.ಜೆ.ಪಿ. ಅಭ್ಯರ್ಥಿಯಾಗಿದ್ದು, ಗೆಳೆಯನ ಗೆಲುವಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪಣತೊಟ್ಟಿದ್ದಾರೆ.

ಕ್ಷೇತ್ರದಲ್ಲಿಯೇ ಮನೆ ಮಾಡಿರುವ ಜನಾರ್ಧನ ರೆಡ್ಡಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಿ.ಜೆ.ಪಿ. ಟಿಕೆಟ್ ವಂಚಿತರಾಗಿರುವ ಶಾಸಕ ತಿಪ್ಪೇಸ್ವಾಮಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಗೆಲುವಿನ ಓಟವನ್ನು ಮುಂದುವರೆಸಲು ಸಜ್ಜಾಗಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರಕ್ಕೆ ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ತಿಪ್ಪೇಸ್ವಾಮಿ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಂತರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಸಿ ಭರ್ಜರಿಯಾಗಿಯೇ ಪ್ರಚಾರ ಶುರು ಮಾಡಿದ್ದಾರೆ. ಬಾದಾಮಿಯಲ್ಲಿಯೂ ನಾಮಪತ್ರ ಸಲ್ಲಿಸಿರುವ ಅವರು ಇಂದಿನಿಂದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ಕಣಕುಪ್ಪೆ ಗ್ರಾಮದಿಂದ ಬಿರುಸಿನ ಪ್ರಚಾರ ನಡೆಸಲಿದ್ದು, ಹಳ್ಳಿ ಹಳ್ಳಿಗಳಿಗೆ ತೆರಳಿ ಮತಯಾಚಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...