alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. 2 ಕ್ಷೇತ್ರದಲ್ಲಿ ಸ್ಪರ್ಧೆ, ಖಚಿತಪಡಿಸಿದ ಪುತ್ರ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಪ್ರಚಾರವನ್ನೂ ನಡೆಸಿ, ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ.

ಆದರೆ, ಚಾಮುಂಡೇಶ್ವರಿ ಕ್ಷೇತ್ರ ಸೇಫಲ್ಲ, ಎನ್ನುವ ಕಾರಣಕ್ಕೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರ ಪುತ್ರ, ವರುಣಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಡಾ. ಯತೀಂದ್ರ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ತಂದೆಯವರು 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದ್ದು, ತಮಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಒಂದೂವರೆ ವರ್ಷದಿಂದ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದೇನೆ. ಎಲ್ಲರೂ ಪರಿಚಿತರಾಗಿದ್ದು, ಒಬ್ಬನೇ ಪ್ರಚಾರ ನಡೆಸುವಷ್ಟು ಹತ್ತಿರವಾಗಿದ್ದೇನೆ. ತಂದೆಯವರೂ 2 ದಿನ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಯತೀಂದ್ರ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...