alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರೊಂದಿಗಿನ ಸಂವಾದದಲ್ಲಿ ಮೋದಿ ಹೇಳಿದ್ದೇನು?

‘ನೇಗಿಲು ಹಿಡಿದು ಹೊಲದೊಳು ಹಾಡುತಾ ಉಳುವ ಯೋಗಿಯ ನೋಡಲ್ಲಿ’ ಎಂದು ಮಹಾನ್ ಕವಿ ಕುವೆಂಪು ಹೇಳಿದ್ದಾರೆ. ನೇಗಿಲು ಹಿಡಿದ ಯೋಗಿಯ ಹಿತಕಾಯಲು ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರೊಂದಿಗೆ ‘ನರೇಂದ್ರ ಮೋದಿ ಆಪ್’ ಮೂಲಕ ವಿಡಿಯೋ ಸಂವಾದ ನಡೆಸಿದ ಅವರು, ನೇಗಿಲ ಯೋಗಿಗಳೊಂದಿಗೆ ಸಂವಾದ ನಡೆಸಲು ಅವಕಾಶ ಸಿಕ್ಕಿದೆ. ನಿಸರ್ಗಕ್ಕೆ ಹೊಂದುವಂತಹ ಸರ್ವತೋಮುಖ ಉಪಯೋಗ ಪಡೆಯುವ ಕೃಷಿಯನ್ನು ಮಾಡಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ರೈತರ ಆದಾಯವನ್ನು ಹೆಚ್ಚಿಸಲು ಹಲವು ಹೊಸ ಪ್ರಯೋಗಗಳನ್ನು ಜೋಡಿಸಲಾಗುತ್ತಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಿಂದ ಸಾಕಷ್ಟು ಲಾಭವಿದೆ. ಆದರೆ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಈ ಯೋಜನೆಯನ್ನು ಜನರಿಗೆ ತಲುಪಿಸುವ ಕೆಲಸವನ್ನು ಮಾಡಿಲ್ಲ ಎಂದು ದೂರಿದ್ದಾರೆ.

ನಮ್ಮ ಸಂಸದರು ಈ ನಿಟ್ಟಿನಲ್ಲಿ ಕೆಲಸ ಮಾಡಲು ಮುಂದಾದಾಗ ರಾಜ್ಯ ಸರ್ಕಾರ ಸಹಕಾರ ನೀಡಲಿಲ್ಲ. ಕಾಂಗ್ರೆಸ್ ಗೆ ರೈತರ ಬಗ್ಗೆ ಕಾಳಜಿ ಇಲ್ಲ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದರೆ, ರೈತರ ಸಂಕಷ್ಟಗಳಿಗೆ ಪರಿಹಾರ ಸಿಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಕೃಷಿ ಮಾರುಕಟ್ಟೆಯಲ್ಲಿ ಬದಲಾವಣೆ ತರುವ ಕೆಲಸ ಮಾಡುತ್ತಿದ್ದೇವೆ. ಸರಿಯಾದ ಮಾರುಕಟ್ಟೆ ಕಲ್ಪಿಸಿ ಬೆಳೆಗಳಿಗೆ ಉತ್ತಮ ಧಾರಣೆ ಸಿಗುವಂತೆ ಮಾಡಲಾಗುತ್ತಿದೆ. ರೈತರ ಪರ ಕಾಳಜಿ ನಮ್ಮ ಸರ್ಕಾರದ ಮುಖ್ಯ ಜವಾಬ್ದಾರಿಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...