alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ರಾಜ್ಯದಲ್ಲಿ ಆಡಳಿತ ನಡೆಸಿದ ಪಕ್ಷಗಳ ಮಾಹಿತಿ

ವಿಧಾನಸಭೆ ಚುನಾವಣೆಗೆ ಇದೇ ಮೇ 12 ರಂದು ಮತದಾನ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಪ್ರಕಟವಾಗಲಿದೆ. ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಹೇಳಲಾಗಿದ್ದರೂ, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ಕುತೂಹಲವಿದೆ. ರಾಜ್ಯದಲ್ಲಿ ಯಾವ ಪಕ್ಷಗಳು ಅಧಿಕಾರ ನಡೆಸಿವೆ ಎಂಬುದರ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಅವಧಿಗೆ ಆಡಳಿತ ನಡೆಸಿದ್ದು ಕಾಂಗ್ರೆಸ್ ಪಕ್ಷ. ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿ ಕಾಂಗ್ರೆಸ್ ಪಕ್ಷದವರೇ ಆಗಿದ್ದರು. ಇನ್ನು ಕರ್ನಾಟಕ ಎಂದು ನಾಮಕರಣವಾದ ಸಂದರ್ಭ ಮತ್ತು ನಂತರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತವಿತ್ತು.

1947 ರಿಂದ 1983 ರ ವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದೆ. 1983 ರಿಂದ 1989 ರ ವರೆಗೆ ಜನತಾಪಕ್ಷದ ಆಡಳಿತ ರಾಜ್ಯದಲ್ಲಿತ್ತು. 1989 ರಿಂದ 1994 ರ ವರೆಗೆ ಕಾಂಗ್ರೆಸ್ ಸರ್ಕಾರ ಇದ್ದರೆ, 1994 ರಿಂದ 1999 ರ ವರೆಗೆ ಜನತಾದಳ ಆಡಳಿತ ನಡೆಸಿದೆ. 1999ರಿಂದ 2004 ರ ವರೆಗೆ ಕಾಂಗ್ರೆಸ್ ಅಧಿಕಾರದಲ್ಲಿತ್ತು.

2004 ರಲ್ಲಿ ಅತಂತ್ರ ಫಲಿತಾಂಶ ಬಂದಿದ್ದರಿಂದ ಕಾಂಗ್ರೆಸ್–ಜೆ.ಡಿ.ಎಸ್. ಸಮ್ಮಿಶ್ರ ಸರ್ಕಾರ 2004 ರಿಂದ 2006 ರ ವರೆಗೆ ಆಡಳಿತದಲ್ಲಿತ್ತು. 2006 ರಿಂದ 2008 ರ ವರೆಗೆ ಜೆ.ಡಿ.ಎಸ್.–ಬಿ.ಜೆ.ಪಿ. ಸಮ್ಮಿಶ್ರ ಸರ್ಕಾರ ಆಡಳಿತ ನಡೆಸಿದೆ.

2008 ರಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರುವ ಮೂಲಕ, ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬಂದಿತ್ತು. 2013 ರಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಿತು. ಈ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬಹುಮತ ಬರಲಿದೆ. ಇಲ್ಲವೇ ಅತಂತ್ರ ಸರ್ಕಾರ ರಚನೆಯಾಗುತ್ತಾ ಎಂಬುದು ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...