alex Certify
ಕನ್ನಡ ದುನಿಯಾ       Mobile App
       

Kannada Duniya

ಅಮಿತ್ ಶಾ ಪ್ರವಾಸ ದಿಢೀರ್ ಮುಂದೂಡಿಕೆ

ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ಮುಂದೂಡಲಾಗಿದೆ. ನಿಗದಿಯಾಗಿದ್ದ ಕಾರ್ಯಕ್ರಮದಂತೆ ಅವರು ಬೆಳಗಾವಿ ಜಿಲ್ಲೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು.

ಸಂಸತ್ ನಲ್ಲಿ ಇಂದು ಸಿ.ಜೆ.ಐ. ದೀಪಕ್ ಮಿಶ್ರಾ ವಿರುದ್ಧ ವಿಪಕ್ಷಗಳು ಮಹಾಭಿಯೋಗ ಪ್ರಸ್ತಾಪ ಮಂಡಿಸಲಿರುವ ಹಿನ್ನಲೆಯಲ್ಲಿ ಅಮಿತ್ ಶಾ ದೆಹಲಿಯಲ್ಲೇ ಉಳಿಯಲಿದ್ದಾರೆ. ಸಂಸತ್ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ದೆಹಲಿಯಲ್ಲಿ ಉಳಿಯಲಿರುವ ಕಾರಣದಿಂದ ಇಂದಿನ ಬೆಳಗಾವಿ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಅವರು ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಒಂದೆರಡು ದಿನಗಳ ಬಳಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಅಮಿತ್ ಶಾ ಇಂದಿನಿಂದ ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ 2 ದಿನಗಳ ಪ್ರವಾಸ ಕೈಗೊಂಡಿದ್ದರು. ಮುಂದಿನ ವಾರಕ್ಕೆ ಪ್ರವಾಸವನ್ನು ಮುಂದೂಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...