alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯೇಂದ್ರ ಪರ ಪ್ರತಾಪ್ ಸಿಂಹ, ರಾಮದಾಸ್ ಬ್ಯಾಟಿಂಗ್

ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲೇಬೇಕೆಂದು ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಒತ್ತಾಯಿಸಿದ್ದಾರೆ.

ಸಿ.ಎಂ. ಪುತ್ರನನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಬೇಕೆಂದು ಮೊದಲೇ ಮನವಿ ಮಾಡಿದ್ದೆವು. ನಮ್ಮ ಒತ್ತಾಯಕ್ಕೆ ಬಿ.ವೈ. ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಳಿಸಲಾಗಿತ್ತು. ಅವರು ಕೆಲವೇ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪ್ರಚಾರ ನಡೆಸಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ವಿಜಯೇಂದ್ರ ಅವರ ಸ್ಪರ್ಧೆಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ, ಈ ಭಾಗದ 15 ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ. ಪಕ್ಷದ ಅಭ್ಯರ್ಥಿಗಳ 4 ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಕೊನೆಯ ಪಟ್ಟಿಯಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ವರುಣಾ ಕ್ಷೇತ್ರದ ಮತದಾರರ ಒತ್ತಾಸೆಯಂತೆ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ರಾಮದಾಸ್ ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...