alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ದಿನವೂ ರಾಹುಲ್ ಗಾಂಧಿ ಮಿಂಚಿನ ಸಂಚಾರ

ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ರಾಜ್ಯದಲ್ಲಿ 5 ನೇ ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದು ದಾವಣಗೆರೆಯಿಂದ 2 ನೇ ದಿನದ ಪ್ರವಾಸ ಆರಂಭಿಸಲಿದ್ದಾರೆ.

ದಾವಣಗೆರೆಯಲ್ಲಿ 4 ಜಿಲ್ಲೆಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿ, ಪಕ್ಷ ಸಂಘಟನೆ ಮತ್ತು ಗೆಲುವಿನ ಕಾರ್ಯತಂತ್ರಗಳ ಕುರಿತಾಗಿ ಸಮಾಲೋಚನೆ ನಡೆಸಲಿದ್ದಾರೆ.

ನಂತರ ಅಡಿಕೆ ಬೆಳೆಗಾರರು ಮತ್ತು ವರ್ತಕರೊಂದಿಗೆ ಸಂವಾದ ನಡೆಸಲಿರುವ ರಾಹುಲ್, ಹೊಳಲ್ಕೆರೆಗೆ ತೆರಳಲಿದ್ದಾರೆ. ಸಚಿವ ಹೆಚ್. ಆಂಜನೇಯ ಅವರ ಕ್ಷೇತ್ರದಲ್ಲಿ ಪ್ರಚಾರ ನಡೆಸಿ, ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ ತೆರಳಲಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆಯಲಿದ್ದಾರೆ.

ತುಮಕೂರು, ಕುಣಿಗಲ್, ಮಾಗಡಿಯಲ್ಲಿ ರೋಡ್ ಶೋ, ಸಮಾರಂಭಗಳಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಏಪ್ರಿಲ್ 7, 8 ರಂದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮತ್ತೆ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಏಪ್ರಿಲ್ 8 ರಂದು ಜನಾಶೀರ್ವಾದ ಯಾತ್ರೆಯ ಸಮಾರೋಪ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...