alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಿಧೆಡೆ ಬಿರುಗಾಳಿ ಮಳೆ, ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಸಿರಗಾರದೊಡ್ಡಿಯಲ್ಲಿ ದನ ಮೇಯಿಸುತ್ತಿದ್ದ ಬಾಲಕ ಮೌನೇಶ್(12) ಸಿಡಿಲಿಗೆ ಸಾವನ್ನಪ್ಪಿದ್ದಾರೆ. ಮಳೆಯಾದ ಕಾರಣ ಮರದ ಕೆಳಗೆ ಮೌನೇಶ್ ನಿಂತಿದ್ದ ವೇಳೆ ಸಿಡಿಲು ಬಡಿದಿದೆ.

ಮೈಲಾಪುರ ಗ್ರಾಮದಲ್ಲಿ ಮರದ ಕೆಳಗೆ ನಿಂತಿದ್ದ ಕುಮಾರ್(30) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ರಾಮಸಮುದ್ರ ಬಳಿ ಸಿಡಿಲು ಬಡಿದು 12 ಮೇಕೆ ಸಾವನ್ನಪ್ಪಿವೆ.

ರಾಯಚೂರು ಜಿಲ್ಲೆ ಸಿಂಧನೂರು ಸಾಲಗುಂದ ಬಳಿ ಮೇಕೆ ಮೇಯಿಸಲು ತೆರಳಿದ್ದ ಮೆಹಬೂಬ್(34) ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ 4 ಮೇಕೆಗಳು ಕೂಡ ಸಾವನ್ನಪ್ಪಿವೆ. ಕೆಲವೆಡೆ ಆಲಿಕಲ್ಲು ಸಹಿತ ರಭಸದ ಮಳೆಯಾಗಿ ವಿವಿಧ ಬೆಳೆಗಳಿಗೆ ಹಾನಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...