alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಗಾರಪ್ಪರ ದಾಖಲೆಯನ್ನು ಸರಿಗಟ್ಟಲಿದ್ದಾರೆಯೇ ಯಡಿಯೂರಪ್ಪ?

ಹಿಂದಿನಿಂದಲೂ ಶಿವಮೊಗ್ಗ ಜಿಲ್ಲೆಯ ನಾಯಕರು ರಾಜ್ಯ ರಾಜಕಾರಣದಲ್ಲಿ ಪ್ರಮುಖವಾದ ಪಾತ್ರವನ್ನು ನಿರ್ವಹಿಸಿದ್ದಾರೆ. ಹಲವರು ಚುನಾವಣೆಗಳಲ್ಲಿ ಗೆಲುವು, ಸೋಲು ಕಂಡಿದ್ದಾರೆ.

ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕಡಿದಾಳು ಮಂಜಪ್ಪ, ಎಸ್. ಬಂಗಾರಪ್ಪ, ಜೆ.ಹೆಚ್. ಪಟೇಲ್, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾರೆ. ಇವರಲ್ಲಿ ಯಾರೂ ಕೂಡ ಪೂರ್ಣಾವಧಿಗೆ ಮುಖ್ಯಮಂತ್ರಿಗಳಾಗದೇ ಅಧಿಕಾರದಿಂದ ಕೆಳಗಿಳಿದಿದ್ದಾರೆ.

ಈಗ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಬಿ.ಜೆ.ಪಿ.ಯಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿ.ಎಸ್. ಯಡಿಯೂರಪ್ಪ ಅವರನ್ನು ಘೋಷಿಸಲಾಗಿದೆ. ಬಿ.ಜೆ.ಪಿ. ಅಧಿಕಾರಕ್ಕೆ ಬಂದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ. ಮೇ 17 ರಂದು ಪ್ರಮಾಣ ವಚನ ಸ್ವೀಕರಿಸುವುದಾಗಿ ಬಿ.ಎಸ್.ವೈ. ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಈ ಬಾರಿ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಅವರಿಗೆ, ಜೆ.ಡಿ.ಎಸ್., ಕಾಂಗ್ರೆಸ್ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದ್ದಾರೆ. 2008 ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ವಿರುದ್ಧ ಯಡಿಯೂರಪ್ಪ ದಾಖಲೆಯ ಮತಗಳಿಸಿ ಜಯಗಳಿಸಿದ್ದರು. ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರಿಂದ ಶಿಕಾರಿಪುರ ಮತದಾರರು ಹೆಚ್ಚಿನ ಬೆಂಬಲ ನೀಡಿದ್ದರು. ಈ ಚುನಾವಣೆಯಲ್ಲಿಯೂ ಬಿ.ಎಸ್.ವೈ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವುದರಿಂದ ಮತದಾರರು ಅವರನ್ನು ಬೆಂಬಲಿಸಲಿದ್ದಾರೆ ಎನ್ನಲಾಗ್ತಿದೆ.

ಯಡಿಯೂರಪ್ಪ ಅವರು ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದಲ್ಲಿ ಎಸ್. ಬಂಗಾರಪ್ಪನವರ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದಲ್ಲಿ ಎಸ್. ಬಂಗಾರಪ್ಪ 7 ಬಾರಿ ಚುನಾಯಿತರಾಗಿದ್ದಾರೆ. 6 ಸಲ ಗೆದ್ದಿರುವ ಯಡಿಯೂರಪ್ಪ ಈ ಬಾರಿ ಗೆದ್ದಲ್ಲಿ ಜಿಲ್ಲೆಯಿಂದ 7 ಬಾರಿ ಗೆದ್ದ ದಾಖಲೆ ಸಮಗೊಳಿಸಲಿದ್ದಾರೆ.

1983 ರಲ್ಲಿ ಶಿಕಾರಿಪುರ ಸಾಮಾನ್ಯ ಕ್ಷೇತ್ರವಾದ ಬಳಿಕ ಯಡಿಯೂರಪ್ಪ ನಿರಂತರವಾಗಿ ಗೆಲುವು ಕಂಡಿದ್ದಾರೆ. 1999 ರ ಚುನಾವಣೆಯಲ್ಲಿ ಮಾತ್ರ ಅವರು ಸೋಲು ಕಂಡಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿ.ಎಸ್.ವೈ. ಸಂಸದರಾಗಿದ್ದರಿಂದ ಶಿಕಾರಿಪುರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಅವರ ಪುತ್ರ ಬಿ.ವೈ. ರಾಘವೇಂದ್ರ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ಬಿ.ಎಸ್.ವೈ. ಮತ್ತೆ ಸ್ಪರ್ಧಿಸಿದ್ದು, ಜಿಲ್ಲೆಯ ರಾಜಕಾರಣದಲ್ಲಿ ದಾಖಲೆ ಸರಿಗಟ್ಟಲು ಸಜ್ಜಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...