alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್.ಆರ್. ನಗರ ಚುನಾವಣೆ ಮುಂದೂಡಲು ಬಿ.ಎಸ್.ವೈ. ಆಗ್ರಹ

ಶಿವಮೊಗ್ಗ: ಬೆಂಗಳೂರು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ಮುಂದೂಡಬೇಕೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಆರ್.ಆರ್. ನಗರದಲ್ಲಿ ಸುಮಾರು 10,000 ಕ್ಕೂ ಅಧಿಕ ವೋಟರ್ ಐ.ಡಿ. ಅಕ್ರಮ ಸಂಗ್ರಹ ಪತ್ತೆಯಾಗಿದ್ದು, ಚುನಾವಣೆಯಲ್ಲಿ ಅಕ್ರಮ ನಡೆಯುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಚುನಾವಣೆಯನ್ನು ಮುಂದೂಡಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್, ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ. ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಅಕ್ರಮ ಹಣ ಸಾಗಣೆ, ಹಂಚಿಕೆ ಮಾಡಲಾಗುತ್ತಿದೆ. ನಕಲಿ ವೋಟರ್ ಐ.ಡಿ.ಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...