alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ಮುಂದುವರೆದ ಬಿ.ಜೆ.ಪಿ. ಟಿಕೆಟ್ ಫೈಟ್

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ, ಶಿವಮೊಗ್ಗ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಎಸ್. ರುದ್ರೇಗೌಡ ವಿಧಾನ ಪರಿಷತ್ ಸದಸ್ಯ ಸ್ಥಾನದ ಆಫರ್ ನಿರಾಕರಿಸಿದ್ದಾರೆ.

ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ನಡುವಿನ ಗೊಂದಲ ಬಗೆಹರಿಸಿ, ಈಶ್ವರಪ್ಪನವರಿಗೆ ಶಿವಮೊಗ್ಗದಿಂದ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ.

ಯಡಿಯೂರಪ್ಪ ಕೂಡ ಇದನ್ನು ಸ್ಪಷ್ಟಪಡಿಸಿದ್ದು, ಶಿವಮೊಗ್ಗದಿಂದ ಈಶ್ವರಪ್ಪ ಕಣಕ್ಕಿಳಿಯಲಿದ್ದಾರೆ. ರುದ್ರೇಗೌಡರನ್ನು ಎಂ.ಎಲ್.ಸಿ. ಮಾಡಲಾಗುವುದು ಎಂದು ತಿಳಿಸಿದ್ದರು. ಆದರೆ, ಈ ಬೆಳವಣಿಗೆಗಳ ಬಳಿಕ ರುದ್ರೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಸಿಗದಿರುವುದಕ್ಕೆ ನನಗೆ ಮತ್ತು ತಮ್ಮ ಬೆಂಬಲಿಗರಿಗೆ ಬೇಸರವಾಗಿದೆ ಎಂದು ರುದ್ರೇಗೌಡ ಹೇಳಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಈಶ್ವರಪ್ಪ ಅವರಿಗೆ ಇನ್ನೂ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿಲ್ಲ. ನಾನಿನ್ನೂ ಆಕಾಂಕ್ಷಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಪಕ್ಷದಿಂದ ಅಧಿಕೃತವಾಗಿ ಈಶ್ವರಪ್ಪರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ರುದ್ರೇಗೌಡರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...