alex Certify
ಕನ್ನಡ ದುನಿಯಾ       Mobile App
       

Kannada Duniya

ದಿನೇಶ್ ಗುಂಡೂರಾವ್ ಕ್ಷಮೆ ಕೇಳಲಿ: ಈಶ್ವರಪ್ಪ

ಶಿವಮೊಗ್ಗ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಚಪ್ಪಲಿಯಿಂದ ಹೊಡೆಯಿರಿ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿರುವುದರ ವಿರುದ್ಧ ಬಿ.ಜೆ.ಪಿ.ಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸಲಾಗಿದೆ. ಸಿ.ಎಂ. ಯೋಗಿ ಆದಿತ್ಯನಾಥ್ ಅವರನ್ನು ಖಂಡಿಸುವ ಭರದಲ್ಲಿ ದಿನೇಶ್ ಗುಂಡೂರಾವ್ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ದೂರಿದ್ದಾರೆ.

ಇಂತಹ ಪದ ಬಳಕೆ ಮಾಡಿರುವುದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಯೋಗಿ ಧರ್ಮ ರಕ್ಷಣೆ ಮಾಡುತ್ತಿದ್ದಾರೆ. ನಾಥ ಪಂಥದ ಸಂತರಾಗಿದ್ದಾರೆ. ದಿನೇಶ್ ಗುಂಡೂರಾವ್ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕಿದೆ. ಟಿಕೆಟ್ ಘೋಷಣೆಯಾದ ಬಳಿಕ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೇಳಲಿದ್ದು, ಚುನಾವಣೆ ಬಳಿಕ ಕಾಂಗ್ರೆಸ್ ವಿಸರ್ಜನೆಯಾಗಲಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...