alex Certify
ಕನ್ನಡ ದುನಿಯಾ       Mobile App
       

Kannada Duniya

ವರಿಷ್ಠರ ವಿರುದ್ಧ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ: ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರಗೆ ಟಿಕೆಟ್ ನೀಡದಿರುವ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಈಶ್ವರಪ್ಪ ಗಂಟೆಗೂ ಅಧಿಕ ಕಾಲ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾದಲ್ಲಿ ವಿಜಯೇಂದ್ರ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದು, ನಾಮಪತ್ರ ಸಲ್ಲಿಕೆ ಕೊನೆ ಅವಧಿಯಲ್ಲಿ ಅವರಿಗೆ ಸೂಚನೆ ನೀಡಲಾಗಿದೆ. ಟಿಕೆಟ್ ಕೊಡುವುದಿಲ್ಲ ಎಂದು ಮೊದಲೇ ಹೇಳಬೇಕಿತ್ತು. ಮೊದಲೇ ಹೇಳಿದ್ದರೆ, ವಿಜಯೇಂದ್ರ ಅಲ್ಲಿಗೆ ಹೋಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ವಿಜಯೇಂದ್ರ ಅವರು ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಕ್ಷೇತ್ರಕ್ಕೆ ಅವರ ಹೆಸರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿತ್ತು. ಏಕೆ ಗೊಂದಲವಾಯ್ತೋ ಗೊತ್ತಿಲ್ಲ. ನಮಗೆ ನೋವಾಗಿದೆ. ಆದರೂ ಕೂಡ ನಮ್ಮದು ಶಿಸ್ತಿನ ಪಕ್ಷವಾಗಿದೆ. ಪಕ್ಷದ ಕೇಂದ್ರ ನಾಯಕರು ಹೇಳಿದ್ದನ್ನು ಕೇಳಬೇಕಿದೆ ಎಂದು ತಿಳಿಸಿದ್ದಾರೆ.

ವಿಜಯೇಂದ್ರ ಅವರಿಗೆ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದರಿಂದ ಪಕ್ಷದ ಸಂಘಟನೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...