alex Certify
ಕನ್ನಡ ದುನಿಯಾ       Mobile App
       

Kannada Duniya

ಸಮಾವೇಶದಲ್ಲಿ ಅಮಿತ್ ಶಾ, ರೆಸಾರ್ಟ್ ನಲ್ಲಿ ಸಿದ್ಧರಾಮಯ್ಯ

ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರ ಪ್ರವಾಸ, ಕಾರ್ಯತಂತ್ರ ಜೋರಾಗಿದೆ. ನಿನ್ನೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರವಾಸ ಕೈಗೊಂಡಿದ್ದ ಸಿ.ಎಂ. ಸಿದ್ಧರಾಮಯ್ಯ ವಿಶ್ರಾಂತಿಯಲ್ಲಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕು ಬಂಡೀಪುರದ ರೆಸಾರ್ಟ್ ನಲ್ಲಿ ತಂಗಿರುವ ಸಿದ್ಧರಾಮಯ್ಯ ಹೆಸರಿಗಷ್ಟೇ ವಿಶ್ರಾಂತಿಯಲ್ಲಿದ್ದು, ಮುಖಂಡರೊಂದಿಗೆ ಸಾಲು, ಸಾಲು ಸಭೆಗಳಲ್ಲಿ ನಿರತರಾಗಿದ್ದಾರೆ. ತಾವು ಸ್ಪರ್ಧಿಸಲಿರುವ ಚಾಮುಂಡೇಶ್ವರಿ, ಪುತ್ರ ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರ ಮಾತ್ರವಲ್ಲದೇ, ಸುತ್ತಮುತ್ತಲಿನ ಕ್ಷೇತ್ರಗಳ ಮುಖಂಡರೊಂದಿಗೆ ಸಭೆ ನಡೆಸಿ ಚುನಾವಣೆ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ.

ಸಿ.ಎಂ. ತವರು ಜಿಲ್ಲೆಯಲ್ಲಿ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಬಿರುಸಿನ ಪ್ರಚಾರ ನಡೆಸಿದ್ದಾರೆ. ಮಠ, ದೇವಾಲಯ, ರಾಜವಂಶಸ್ಥರ ಭೇಟಿ ಮಾಡಿದ್ದಾರೆ. ಪಕ್ಷದ ವತಿಯಿಂದ ಆಯೋಜಿಸಿದ್ದ ವಿವಿಧ ಕಾರ್ಯಕ್ರಮ, ಸಮಾವೇಶದಲ್ಲಿ ಪಾಲ್ಗೊಂಡು ಪ್ರಚಾರ ನಡೆಸಿದ್ದಾರೆ. ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅಮಿತ್ ಶಾ ಬಿರುಸಿನ ಪ್ರಚಾರ ನಡೆಸಿ, ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...