alex Certify
ಕನ್ನಡ ದುನಿಯಾ       Mobile App
       

Kannada Duniya

ನಾಮಪತ್ರ ಸಲ್ಲಿಕೆಗೆ ಮುನ್ನ ಶ್ರೀರಾಮುಲು ವಿಶೇಷ ಪೂಜೆ

ಸಂಸದ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಬಳ್ಳಾರಿಯ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಳಿಗ್ಗೆ 3 ಗಂಟೆಯಿಂದಲೇ ಗೋ ಪೂಜೆ, ಲಿಂಗಪೂಜೆ. ರುದ್ರಾಭಿಷೇಕ ಸೇರಿ ಹಲವು ಪೂಜಾ ಕಾರ್ಯ ನೆರವೇರಿಸಿದ್ದಾರೆ. ವಿವಿಧ ದೇವಾಲಯ, ಮಠಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮೊಳಕಾಲ್ಮೂರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಅವರಿಗೆ ಟಿಕೆಟ್ ನೀಡಿದ್ದಕ್ಕೆ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಶ್ರೀರಾಮುಲು ಗೆಲುವಿಗೆ ಗೆಳೆಯ ಜನಾರ್ಧನ ರೆಡ್ಡಿ ಸಾಥ್ ನೀಡ್ತಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...