alex Certify
ಕನ್ನಡ ದುನಿಯಾ       Mobile App
       

Kannada Duniya

ಗಂಡ್ಸಾಗಿದ್ರೇ ಗೆಲ್ಲು ನೋಡೋಣ….ಶ್ರೀರಾಮುಲುಗೆ ತಿಪ್ಪೇಸ್ವಾಮಿ ಸವಾಲ್

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ವಂಚಿತರಾಗಿರುವ ಶಾಸಕ ತಿಪ್ಪೇಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ತಮ್ಮ ಸ್ವಗ್ರಾಮದಲ್ಲಿ ಬೆಂಬಲಿಗರ ಸಭೆ ನಡೆಸಿದ ತಿಪ್ಪೇಸ್ವಾಮಿ, ಬಿ.ಜೆ.ಪಿ. ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ. ನನಗೇ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದ ಶ್ರೀರಾಮುಲು ಅವರು ಬಳ್ಳಾರಿ ಜಿಲ್ಲೆಯಲ್ಲಿ ಸೋಲುವ ಭೀತಿಯಿಂದ ಮೊಳಕಾಲ್ಮೂರು ಕ್ಷೇತ್ರಕ್ಕೆ ಬಂದಿದ್ದಾರೆ. ಅವರು ಗಂಡಸಾಗಿದ್ದರೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.

ತಮ್ಮ ವಿರುದ್ಧ ತಿಪ್ಪೇಸ್ವಾಮಿ ಸ್ಪರ್ಧಿಸಿ ಗೆಲ್ಲಲಿ ಎಂದು ಶ್ರೀರಾಮುಲು ಹೇಳಿದ್ದಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಶ್ರೀರಾಮುಲು ಅವರನ್ನು ಸೋಲಿಸುತ್ತೇನೆ. ಶ್ರೀರಾಮುಲು ದಬ್ಬಾಳಿಕೆಗೆ ಇಲ್ಲಿನ ಜನ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಭಟನೆ ನಡೆಸಿದ್ದ ಮಹಿಳೆಯರು, ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮುಲು ಅವರು ಇದಕ್ಕೆಲ್ಲಾ ಕಾರಣರಾಗಿದ್ದು, ಅವರನ್ನು ಸೋಲಿಸುತ್ತೇನೆ ಎಂದು ಸವಾಲ್ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...