alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲು ಬಿರುಸಿನ ಪ್ರಚಾರ, ಏನಾಗಲಿದೆ ತಿಪ್ಪೇಸ್ವಾಮಿ ನಿರ್ಧಾರ…?

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಶ್ರೀರಾಮುಲು ಮತ್ತು ಶಾಸಕ ತಿಪ್ಪೇಸ್ವಾಮಿ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ.

ಬೆಳವಣಿಗೆಯಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು, ತಿಪ್ಪೇಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ. ಇಂದಿನಿಂದಲೇ ನಾವು ಪ್ರಚಾರ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಪ್ರಚಾರ ಮುಂದುವರೆಸಿದ್ದಾರೆ.

ಟಿಕೆಟ್ ಗಾಗಿ ಪೈಪೋಟಿ ನಡೆಸಿದ ಶಾಸಕ ತಿಪ್ಪೇಸ್ವಾಮಿ ಇಂದು ತಮ್ಮ ಸ್ವಗ್ರಾಮ ಚಳ್ಳಕೆರೆ ತಾಲ್ಲೂಕಿನ ನೇರಲಗುಂಟೆಯಲ್ಲಿ ಬೆಂಬಲಿಗರ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದ್ದು, ಸಭೆಯ ಬಳಿಕ ತಿಪ್ಪೇಸ್ವಾಮಿ ತಮ್ಮ ಮುಂದಿನ ರಾಜಕೀಯ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

ಬಳ್ಳಾರಿಯಿಂದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರಕ್ಕೆ ಶ್ರೀರಾಮುಲು ಬಂದಿರುವುದಕ್ಕೆ ತಿಪ್ಪೇಸ್ವಾಮಿ ಬೆಂಬಲಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...